ಭಾರತ ಜೋಡೋ ಯಾತ್ರೆ ಯಶಸ್ವಿಗೊಳಿಸಿ: ತಂಗಡಗಿ.

Spread the love

ಭಾರತ ಜೋಡೋ ಯಾತ್ರೆ ಯಶಸ್ವಿಗೊಳಿಸಿ: ತಂಗಡಗಿ.

ಕನಕಗಿರಿ: ಅ.15ರಂದು ಬಳ್ಳಾರಿ ನಗರದಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಮಾಜಿ ಸಚಿವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ್ ತಂಗಡಗಿ ಕರೆ ನೀಡಿದರು. ಪಟ್ಟಣದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸೋಮವಾರ ಭಾರತ ಜೋಡೋ ಯಾತ್ರೆಯ ಪೂರ್ವ ಭಾವಿ ಸಭೆಯಲ್ಲಿ ಕರೆದಿದ್ದ ಪಕ್ಷದ ಪ್ರಮುಖರನ್ನು ದ್ದೇಶಿಸಿ ಮಾತನಾಡಿದರು.ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ದೊಡ್ಡದಷ್ಟೇ ಅಲ್ಲದೆ ದೇಶದ ಅಭಿವೃದ್ಧಿ ವಿಷಯದಲ್ಲಿ ದೊಡ್ಡ ಪಾತ್ರ ಇದೆ. ಎನೋ ಬದಲಾವಣೆ ಮಾಡುತ್ತೇವೆ ಎಂಬ ಸುಳ್ಳು ಭರವಸೆಗಳನ್ನು ದೇಶದ ಜನರಿಗೆ ನೀಡುತ್ತಾ, ಹೇಳಿಕೊಳ್ಳುವಂತಹ ಯಾವುದೇ ಮಹತ್ವದ ಬದಲಾವಣೆ ಮಾಡದೆ ಬೆಲೆ ಏರಿಕೆ, ಧರ್ಮ ಭೇದ, ಜಾತಿ ಭೇದದ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿಯ ಕುರಿತು ದೇಶದ ಜನತೆ ಆಕ್ರೋಶ ಭರಿತರಾಗಿದ್ದು ತಕ್ಕ ಪಾಠ ಕಲಿಸಲು ತುದಿಗಾಲ ಮೇಲೆ ನಿಂತಿದ್ದಾರೆ, ಪಕ್ಷದ ಕಾರ್ಯಕರ್ತರು ಬಿಜೆಪಿ ಪಕ್ಷದ ನಾಟಕಿಯ ರಾಜಕೀಯವನ್ನು ಪ್ರತಿ ಮನೆ ಮನೆಗೂ ತಲುಪಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.ಇದೆ ವೇಳೆ ಭಾರತ ಜೋಡೋ ಯಾತ್ರೆಯ ಜಿಲ್ಲಾ ಸಂಚಾಲಕ ರೆಡ್ಡಿ ಶ್ರೀ ನಿವಾಸ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಗಂಗಾಧರಸ್ವಾಮಿ, ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ, ವಕ್ತಾರರಾದ ಶರಣಪ್ಪ ಭತ್ತದ ಭಾರತ ಜೋಡೋ ಯಾತ್ರೆ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕರು, ಪ.ಪಂ.ಸದಸ್ಯರು, ಗ್ರಾ.ಪಂ ಸದಸ್ಯರು ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು. ಫೋಟೋ ಕನಕಗಿರಿ: ಪಟ್ಟಣದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಭಾರತ ಜೋಡೋ ಯಾತ್ರೆಯ ಪೂರ್ವ ಭಾವಿ ಸಭೆ ನಡೆಯಿತು.

ವರದಿ – ಆದಪ್ಪ ಮಾಲಿಪಾಟೀಲ್.

Leave a Reply

Your email address will not be published. Required fields are marked *