ಜೋರು ನಮ್ಮ ಕನ್ನಡದ ತೇರು, ತಾವರಗೇರಾ ಪಟ್ಟಣದಲ್ಲಿಂದು ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆ ಯಶಸ್ವಿ.

Spread the love

ಜೋರು ನಮ್ಮ ಕನ್ನಡದ ತೇರು, ತಾವರಗೇರಾ ಪಟ್ಟಣದಲ್ಲಿಂದು ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆ ಯಶಸ್ವಿ.

ಕೊಪ್ಪಳ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲ್ಲೂಕು ಆಡಳಿತ ಕುಷ್ಟಗಿ ಮತ್ತು ವಿವಿಧ ಕನ್ನಡಪರ ಸಂಘಟನೆಗಳು ಇವರ ವತಿಯಿಂದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿಂದು ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಗೆ ಸೋಮವಾರ ಅದ್ದೂರಿಯಾಗಿ ಸ್ವಾಗತ ದೊರೆಯಿತು. ಹಲಗೆ, ಹಗಲುವೇಷ್, ಕಂಸಾಳೆ, ವೀರಗಾಸೆ, ಡೊಳ್ಳು, ವಿವಿಧ ವಾದ್ಯಗಳು ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳಿಂದ ಭರ್ಜರಿ ಮೆರವಣಿಗೆಯೊಂದಿಗೆ ತಾಲ್ಲೂಕು ಆಡಳಿತವು ಅದ್ದೂರಿಯಾಗಿ ಬರಮಾಡಿಕೊಂಡರು. ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯ ಮೆರವಣಿಗೆಯಲ್ಲಿ ಪಟ್ಟಣದ ಸಂಬಂದಪಟ್ಟ ಎಲ್ಲಾ ಅಧಿಕಾರಿಗಳು, ಶಾಲಾ ಶಿಕ್ಷಕರು ಮತ್ತು ಶಾಲಾ ಮಕ್ಕಳು, ಸಾರ್ವಜನಿಕರು, ಹಿರಿಯರು-ಕಿರಿಯರು ಸೇರಿದಂತೆ ಎಲ್ಲರೂ ಕುಣಿದು, ಕುಪ್ಪಳಿಸಿ, ನೃತ್ಯ ಮಾಡುವುದರ ಮೂಲಕ ಸಂಭ್ರಮದಿಂದ ಪಾಲ್ಗೊಂಡಿದ್ದರು. ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯು ಕುಷ್ಟಗಿ ತಾಲ್ಲೂಕಿನ ತಾವರಗೇರಾ ಪಟ್ಟಣದಿಂದ ಮುಖ್ಯ ಮಾರ್ಗವಾಗಿ ಸಂಭ್ರಮದಿಂದ ಹೊರಟಿತು, ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ. ಇಡೀ ವರ್ಷ ಕರ್ನಾಟಕದ ಇತಿಹಾಸ, ಕಲೆ, ಸಾಹಿತ ಸಂಸ್ಕೃಂತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ – ಕನ್ನಡಿಗ – ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದ್ದು. ಇದರ ಅಂಗವಾಗಿ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಜ್ಯೋತಿ ರಥಯಾತ್ರೆಯು ರಾಜ್ಯಾದಾದ್ಯಂತ ಸಂಚರಿಸಲಿದೆ, 1973ರಲ್ಲಿ ಮೈಸೂರು ರಾಜ್ಯ ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡಿತು. ಅಂದಿನ ಮುಖ್ಯಮಂತ್ರಿ ದಿ.ದೇವರಾಜ ಅರಸ್ ಅವರ ನೇತೃತ್ವದಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯ ಎಂದು ನಾಮಕರಣಗೊಂಡಿದ್ದು ನಮ್ಮ ಹೆಮ್ಮೆ. ಕರ್ನಾಟಕ ಸುವರ್ಣ ಮಹೋತ್ಸವ ಆಚರಿಸುತ್ತಿರುವ ಈ ಶುಭ ಘಳಿಗೆ ಹೆಮ್ಮೆಯ ವಿಷಯವಾಗಿದೆ. ಅನೇಕ ಜನರ ತ್ಯಾಗ ಬಲಿದಾನ ಹಾಗೂ ಸಹಕಾರದಿಂದ ಕರ್ನಾಟಕ ರೂಪುಗೊಂಡಿದೆ ಎಂಬ ಸಂಗತಿಯನ್ನು ಯುವ ಸಮುದಾಯ ಅರಿತುಕೊಳ್ಳಬೇಕು, ಕನ್ನಡ ನೆಲ,ಜಲ, ನಾಡು,ನುಡಿಗಾಗಿ ಶ್ರಮಿಸಬೇಕು, ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಸೇರಿದಂತೆ ತಾವರಗೇರಾ ಪಟ್ಟಣದ ಅಧಿಕಾರಿಗಳು ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ-ಸಂಪಾದಕೀಯಾ,

Leave a Reply

Your email address will not be published. Required fields are marked *