ಮಾದರಿ ಅಂಗನವಾಡಿ ನಿರ್ಮಿಸಿದ ರಾಣೇಬೆನ್ನೂರು ನಗರಸಭೆಗೆ ಕೃತಜ್ಞತೆಗಳು

Spread the love

ಮಾದರಿ ಅಂಗನವಾಡಿ ನಿರ್ಮಿಸಿದ ರಾಣೇಬೆನ್ನೂರು ನಗರಸಭೆಗೆ ಕೃತಜ್ಞತೆಗಳು

ಇಂದು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ, ನಗರಸಭೆ ವತಿಯಿಂದ ನಿರ್ಮಾಣ ಮಾಡಿರುವ ಮಾದರಿ ಅಂಗನವಾಡಿ ಕೇಂದ್ರಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ವೀಕ್ಷಿಸಿ, ಸಿಬ್ಬಂದಿ ಜೊತೆ ಸಮಾಲೋಚನೆ ನಡೆಸಿದರು. ಹೈಟೆಕ್ ಅಂಗನವಾಡಿ ಕೇಂದ್ರ ಇದಾಗಿದ್ದು, ಪುಣಾಣಿಗಳ ಕಲಿಕೆಗಾಗಿ ಬಹಳ ಉತ್ತಮ ರೀತಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಮಕ್ಕಳ ಕಲಿಕೆಗೆ ಅನುಕೂಲವಾಗಲು ವಿಶಾಲವಾದ ವ್ಯವಸ್ಥೆ ಮಾಡಲಾಗಿದ್ದು, ಗೋಡೆಗಳಲ್ಲಿ ಕಲಿಕಾ ಅಕ್ಷರಗಳನ್ನು ಚಿತ್ರಗಳ ಮೂಲಕ ಬಿತ್ತರಿಸಲಾಗಿದೆ. ಒಳಾಂಗಣ ಹಾಗೂ ಹೊರಾಂಗಣ ಆಟಿಕೆಗಳನ್ನು ನಗರಸಭೆಯವರು ನೀಡಿದ್ದಾರೆ. ಪ್ರಸ್ತುತ ಕೋವಿಡ್ ಸೋಂಕು ಇರುವುದರಿಂದ ಮಕ್ಕಳಿಗಾಗಿ, ಇ-ಕಲಿಕೆ ಮೂಲಕ ಶಾಲಾ ಪೂರ್ವ ಶಿಕ್ಷಣವನ್ನು ಮೊಬೈಲ್ ಮೂಲಕ ಸಿಬ್ಬಂದಿ ಪೋಷಕರಿಗೆ ಕಳುಹಿಸುತ್ತಿದ್ದಾರೆ. ಇದೇ ವೇಳೆ ಪೋಷಣ್ ಅಭಿಯಾನಯಡಿ ನೀಡಿರುವ ಮೊಬೈಲ್ ನಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅಪ್ ಲೋಡ್ ಮಾಡುತ್ತಿರುವ ಫಲಾನುಭವಿಗಳ ಮಾಹಿತಿಯನ್ನು ವೀಕ್ಷಿಸಿ, ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *