ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಟಿ ರಘುಮೂರ್ತಿ ಅವರು ಚಳ್ಳಕೆರೆ ನಗರದ ಬಿಸಿಎಂ ಹಾಸ್ಟೆಲ್ ಆವರಣದಲ್ಲಿ ನಡೆಯುತ್ತಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ

Spread the love

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಟಿ ರಘುಮೂರ್ತಿ ಅವರು ಚಳ್ಳಕೆರೆ ನಗರದ ಬಿಸಿಎಂ ಹಾಸ್ಟೆಲ್ ಆವರಣದಲ್ಲಿ ನಡೆಯುತ್ತಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ಅವರು ಚಳ್ಳಕೆರೆ ನಗರದ ಬಿಸಿಎಂ ಹಾಸ್ಟೆಲ್ ಆವರಣದಲ್ಲಿ ನಡೆಯುತ್ತಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳು ಕುರಿತಂತೆ ಪರಿಶೀಲನೆ ನಡೆಸಿದರು.ಇದೇ ವೇಳೆ, ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ವ್ಯಾಪಿಸುತ್ತಿರುವ ಬಗ್ಗೆ ತಜ್ಞರು ವರದಿ ನೀಡುವ ಹಿನ್ನೆಲೆಯಲ್ಲಿ, ಚಳ್ಳಕೆರೆ ತಾಲೂಕಿನಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಕ್ಷೇತ್ರದಲ್ಲಿ ಮಕ್ಕಳಿಗಾಗಿ ತೆರೆಯಬಹುದಾದ ಕೋವಿಡ್ ಕೇರ್ ಕೇಂದ್ರಗಳ ಬಗ್ಗೆ ಮಾಹಿತಿ ಪಡೆದು, ಮುಂದಿನ ದಿನಗಳಲ್ಲಿ ಕೋವಿಡ್ ನಿಯಂತ್ರಿಸಲು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವರದಿ ನೀಡುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ತಾಕೀತು ಮಾಡಿದರು ಈ ಸಮಯದಲ್ಲಿ ತಾಶೀಲ್ದಾರ್ ಮಲ್ಲಿಕಾರ್ಜುನ್ ಆರೋಗ್ಯ ಇಲಾಖೆ ಅಧಿಕಾರಿಗಳಾದ ತಿಪ್ಪೇಸ್ವಾಮಿ ಎ ಸಿಡಿಪಿಒ ನವೀನ್ ಕುಮಾರ್ ಮುಂತಾದ ಅಧಿಕಾರಿಗಳು ಹಾಜರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *