ಕಾರವಾರದ ನೌಕಾನೆಲೆಗೆ ಆಗಮಿಸಿದ ದೇಶದ ರಕ್ಷಣಾ ಸಚಿವರಾದ ಶ್ರೀ ರಾಜನಾಥಸಿಂಗ್ ಅವರನ್ನು ಸ್ವಾಗತಿಸಿ ಸನ್ಮಾನಿಸಲಾಯಿತು.

Spread the love

ಕಾರವಾರದ ನೌಕಾನೆಲೆಗೆ ಆಗಮಿಸಿದ ದೇಶದ ರಕ್ಷಣಾ ಸಚಿವರಾದ ಶ್ರೀ ರಾಜನಾಥಸಿಂಗ್ ಅವರನ್ನು ಸ್ವಾಗತಿಸಿ ಸನ್ಮಾನಿಸಲಾಯಿತು.

ಕಾರವಾರದ ನೌಕಾನೆಲೆಗೆ ಆಗಮಿಸಿದ ದೇಶದ ರಕ್ಷಣಾ ಸಚಿವರಾದ ಶ್ರೀ ರಾಜನಾಥಸಿಂಗ್ ಅವರನ್ನು ಸ್ವಾಗತಿಸಿ ಸನ್ಮಾನಿಸಲಾಯಿತು. ಬಳಿಕ ಸೀಬರ್ಡ ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಿ, ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಒದಗಿಸಲು ಶಿಪ್ ಯಾರ್ಡ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಮನವಿ ನೀಡಲಾಯಿತು ಕಾರವಾರ ಹಾಗೂ ಅಂಕೋಲಾ ಈ ಎರಡೂ ತಾಲೂಕಿನ 4604 ಕುಟುಂಬಗಳು ನೌಕಾನೆಲೆಯಲ್ಲಿ ನಿರಾಶ್ರಿತವಾಗಿವೆ. ಈ ಕುಟುಂಬಗಳು ನಿರಾಶ್ರಿತವಾಗಿ 3 ದಶಕಗಳಾದರೂ ಸಮಾಜದಲ್ಲಿ  ಗೌರವಯುತ ಬದುಕು ಕಂಡುಕೊಳ್ಳುವಲ್ಲಿ ಇದುವರೆಗೂ ಸಾಧ್ಯವಾಗಿಲ್ಲ. ಸದ್ಯ ಕೇವಲ 968 ಕುಟುಂಬಗಳಿಗೆ ಮಾತ್ರ ಉದ್ಯೋಗ ನೀಡಲಾಗಿದೆ.  ನೌಕಾನೆಲೆ ನಿರಾಶ್ರಿತರು ದೇಶಕ್ಕಾಗಿ, ದೇಶದ ರಕ್ಷಣೆಗಾಗಿ ತಮ್ಮ ಮನೆ, ಭೂಮಿ ಎಲ್ಲವನ್ನೂ ತ್ಯಾಗ ಮಾಡಿದ್ದಾರೆ.  ಇದಕ್ಕಾಗಿ ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಬೇಕು. ಉಳಿದ ನಿರಾಶ್ರಿತ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಕೊಡಬೇಕು ಎಂದು ಮನವಿ ಮಾಡಲಾಯಿತು. ನನ್ನ  ಕ್ಷೇತ್ರದಲ್ಲಿ ನೌಕಾನೆಲೆ, ಕೈಗಾ ಅಣು ವಿದ್ಯುತ್ ಸ್ಥಾವರ, ಕೊಂಕಣ ರೇಲ್ವೆ, ಚತುಷ್ಪಥ ಹೆದ್ದಾರಿ, ಕದ್ರಾ, ಕೊಡಸಳ್ಳಿ ಜಲ ವಿದ್ಯುತ್ ಯೋಜನೆಗಳು ಹೀಗೆ ವಿವಿಧ ಕಾರಣಗಳಿಂದ ನಿರಾಶ್ರಿತರಾದ ಕುಟುಂಬಗಳ ಸಂಖ್ಯೆ ಹೆಚ್ಚಿದೆ. ನಿರಾಶ್ರಿತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ದೇಶದ ರಕ್ಷಣೆಗಾಗಿ ತ್ಯಾಗ ಮಾಡಿದವರು ಹೆಮ್ಮೆಯಿಂದ ಬದುಕುವಂತಾಗಬೇಕು.  ಮೂರು ದಶಕಗಳಿಂದ ಪರಿಹಾರಕ್ಕಾಗಿ ಪರದಾಡುತ್ತಿದ್ದ ನಿರಾಶ್ರಿತರಿಗೆ ಪ್ರಧಾನಮಂತ್ರಿಗಳಾದ ಮಾನ್ಯ ನರೇಂದ್ರ ಮೋದಿಜಿ ಅವರ ಕಳಕಳಿಯಿಂದ, ಅಂದಿನ ರಕ್ಷಣಾ ಸಚಿವರಾಗಿದ್ದ ಶ್ರೀಮತಿ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾಗಿದ್ದ, ಸಂಸದರಾದ ಶ್ರೀ ಅನಂತಕುಮಾರ್ ಹೆಗಡೆ ನೇತೃತ್ವದಲ್ಲಿ ಪರಿಹಾರ ವಿತರಿಸಿದ್ದಾರೆ. ಅದಕ್ಕಾಗಿ ಕೇಂದ್ರ ಸರ್ಕಾರವನ್ನು ನಿರಾಶ್ರಿತರ ಪರವಾಗಿ ಅಭಿನಂದಿಸುತ್ತೇನೆ. ಸೀಬರ್ಡ್ ನೌಕಾನೆಲೆಯ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ನೌಕಾನೆಲೆಗೆ ಅಗತ್ಯ ಸಾಮಗ್ರಿಗಳ ತಯಾರಿಕೆಗೆ ಇಲ್ಲಿ ಯಾವುದೇ ಕೈಗಾರಿಕೆಗಳಿಲ್ಲ. ಸ್ಥಳೀಯ ಜನತೆಗೆ ಉದ್ಯೋಗ ಕೊಡುವ ಕೈಗಾರಿಕೆಗಳೂ ಇಲ್ಲವಾಗಿದೆ. ರಕ್ಷಣಾ ಇಲಾಖೆ ನೌಕಾನೆಲೆಯಲ್ಲಿ ಶಿಪ್ ಯಾರ್ಡ ಹಾಗೂ ಪೂರಕ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಂಡು ಉದ್ಯೋಗ ಸೃಷ್ಟಿಸಬೇಕು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *