ಯಲಬುರ್ಗಾ : ತಾಲ್ಲೂಕಿನ ಮುಧೋಳ್ ಗ್ರಾಮದಲ್ಲಿ  ಮಲೇರಿಯಾ ವಿರೋಧಿ ಮಾಸಾಚರಣೆ..

Spread the love

ಯಲಬುರ್ಗಾ : ತಾಲ್ಲೂಕಿನ ಮುಧೋಳ್ ಗ್ರಾಮದಲ್ಲಿ  ಮಲೇರಿಯಾ ವಿರೋಧಿ ಮಾಸಾಚರಣೆ..

ಯಲಬುರ್ಗಾ : ತಾಲ್ಲೂಕಿನ ಮುಧೋಳ್ ಗ್ರಾಮದಲ್ಲಿ  ಪ್ರಾಥಮಿಕ ಆರೋಗ್ಯ ಕೇಂದ್ರ ಗ್ರಾಮ ಪಂಚಾಯಿತಿ ಇವರ ಸಂಯುಕ್ತಾಶ್ರಯದಲ್ಲಿ ಮಲೇರಿಯಾ ಜಾಗೃತ ಸಭೆ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಮುಧೋಳ ಗ್ರಾಮದಲ್ಲಿ ಮುಖ್ಯ ಆರೋಗ್ಯ ಅಧಿಕಾರಿಗಳಾದ ಪವನ್ ಕುಮಾರ್ ಕಾಂಬಳೆ ಕರ್ ಅವರು ಮಾತನಾಡಿ. ಒಂದು ಸಲ ಈ ಅನಾಫಿಲಿಸ್ ಸೊಳ್ಳೆಯು ಮನುಷ್ಯರಿಗೆ ಕಚ್ಚಿದ ಬಳಿಕ ಪ್ಲಾಸ್ಮೋಡಿಯಾ ಮನುಷ್ಯನ ಯಕೃತ್‍ನಲ್ಲಿ ತನ್ನ ಸಂತಾನಾಭಿವೃದ್ಧಿ ಮಾಡಿ, ಸೋಂಕು ಉಂಟು ಮಾಡುತ್ತದೆ. ಕೆಂಪು ರಕ್ತದ ಕಣಗಳನ್ನು ನಾಶಪಡಿಸುತ್ತದೆ. ಸಾಮಾನ್ಯವಾಗಿ ಮಲೇರಿಯಾ ಜ್ವರವನ್ನು ಹೊಂದಿದ ವ್ಯಕ್ತಿಗಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ವಿಪರೀತ ಜ್ವರ, ಹಲ್ಲು ಕಚ್ಚಿಕೊಳ್ಳುವಷ್ಟು ಚಳಿ, ಜತೆಗೆ ಮೈಕೈ ನೋವು ಸಾಮಾನ್ಯ ಸಮಸ್ಯೆಗಳಾಗಿ ಕಾಡುತ್ತವೆ. ಮೊದಲೇ ಇವುಗಳ ಬಗ್ಗೆ ಅರಿತು ಚಿಕಿತ್ಸೆ ಪಡೆದರೆ ಸಾವು ಸಂಭವಿಸುವುದನ್ನು ತಪ್ಪಿಸಬಹುದು ಎಂದು ಅವರು ಹೇಳಿದರು. ಆರೋಗ್ಯ ನಿರೀಕ್ಷಣಾಧಿಕಾರಿ ಎಸ್ ಎಫ್ ಅಂಗಡಿ ಅವರು ಮಾತನಾಡಿ,‘ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸಂಜೆ ಸೊಳ್ಳೆಗಳು ಹೆಚ್ಚುವುದರಿಂದ ಸಂಜೆ ಬೇವಿನ ಸೊಪ್ಪಿನ ಹೋಗೆ ಆಡಿಸಬೇಕು ರಾತ್ರಿ ವೇಳೆ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಮೊದಲೇ ನಾವು ಸೊಳ್ಳೆಗಳ ತಾಣವನ್ನು ನಾಶಮಾಡಿ ಸೊಳ್ಳೆಗಳು ಹೆಚ್ಚಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಮಾತನಾಡಿದರು . 2025 ಕ್ಕೆ ನಾವು ಮಲೇರಿಯಾ ಮುಕ್ತ ಭಾರತ ನಿರ್ಮಾಣ ಮಾಡೋಣ’ ಎಂದು ಹೇಳಿದರು.  ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾರತಿ ಚಲವಾದಿ ಮತ್ತು ಉಪಾಧ್ಯಕ್ಷರಾದ ಚಂದ್ರ ಬಾಯಿ ಕುದರಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರಾದ ಶಾರದಾ ಅಂಜುಮಾ ಬೇಗಂ ಶ್ರೀದೇವಿ ಕಂಬಳಿ ನಾಸಿರ್ ಹೇಮಾಕ್ಷಿ ತಳವಾರ್ ಕಾಳಮ್ಮ ಗುರು ಸಿದ್ದನಗೌಡರ ಪೊಲೀಸ್ ಪಾಟೀಲ್ ಗವಿಸಿದ್ದಪ್ಪ ಕುಂಬಾರ ಪ್ರಶಾಂತ್  ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗಿಯಾ

ವರದಿಹುಸೇನ್ ಮೋತೆಖಾನ್

Leave a Reply

Your email address will not be published. Required fields are marked *