ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಲು ಪ್ರಯತ್ನ ಪಡುತ್ತೇನೆ ಎಂದು ಭರವಸೆ ನೀಡಿದ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ರಾಯಬಾಗ ಮತಕ್ಷೇತ್ರದ ಬಾವಚಿ ಹಾಗೂ ಮಂಟುರ ಗ್ರಾಮದ ಶ್ರೀ ಲಕ್ಷ್ಮೀ ದೇವಸ್ಥಾನಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ದೇವಿಯ ದರುಶನ ಪಡೆದರು. ಬಳಿಕ ಸಭೆ ನಡೆಸಿ, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಲು ಪ್ರಯತ್ನ ಪಡುತ್ತೇನೆ ಎಂದು ಭರವಸೆ ನೀಡಿದರು. ನಂತರ ಜನಸಂಘದ ಸ್ಥಾಪಕರಾದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ನಿಮಿತ್ತವಾಗಿ, ಸಸಿ ನೆಟ್ಟರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ವರದಿ – ಮಹೇಶ ಶರ್ಮಾ