ಎಸ್ಎಸ್ಎಲ್ ಸಿ ಪರೀಕ್ಷೆಗೂ ಮುನ್ನ ಶಿಕ್ಷಕರಿಗೆ ಲಸಿಕೆ….

Spread the love

ಎಸ್ಎಸ್ಎಲ್ ಸಿ ಪರೀಕ್ಷೆಗೂ ಮುನ್ನ ಶಿಕ್ಷಕರಿಗೆ ಲಸಿಕೆ….

ನಿಪ್ಪಾಣಿಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷಾ ಕಾರ್ಯದಲ್ಲಿ ತೊಡಗುವ ಶಿಕ್ಷಕರಿಗೆ ಹಾಗೂ ಅಧಿಕಾರಿಗಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಇದೇ ತಿಂಗಳ 19 ಹಾಗೂ 22ನೇ ತಾರೀಕಿನಂದು ಎಸ್.ಎಸ್.ಎಲ್ ಪರೀಕ್ಷೆ ಇರುವ ನಿಮಿತ್ತವಾಗಿ, ಅಧಿಕಾರಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ನಿಪ್ಪಾಣಿ ತಾಲ್ಲೂಕಿಗೆ ಪ್ರತಿದಿನ 10,000 ಲಸಿಕೆ ಬೇಕು ಈಗಾಗಲೇ ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ್ ಜಿ ಅವರಿಗೆ ಮನವಿ ಮಾಡಿದ್ದೇನೆ. ಸರ್ವರೂ ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ, ಸುರಕ್ಷಿತವಾಗಿರಿ ಎಂದು ಹೇಳಿದರು.  ಈ ಸಂದರ್ಭದಲ್ಲಿ ಅಪರ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಗಡಾದ, ತಾಲೂಕು ವೈದ್ಯಾಧಿಕಾರಿ ಡಾ. ವಿಠ್ಠಲ ಶಿಂಧೆ, ಮುಖ್ಯ ವೈದ್ಯಾಧಿಕಾರಿ ಡಾ. ಸೀಮಾ ಗುಂಜ್ಯಾಳೆ, ಬಿಇಓ ಶ್ರೀಮತಿ ರೇವತಿ ಮಠದ, ನಗರಸಭೆ ಅಧ್ಯಕರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *