ಇಂದು ಬೆಳಿಗ್ಗೆ 11 ಗಂಟೆಗೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ

Spread the love

ಇಂದು ಬೆಳಿಗ್ಗೆ 11 ಗಂಟೆಗೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ…

ಇಂದು ಶಾಸಕಾಂಗ ಸಭೆಯ ಬಳಿಕ ನೇರವಾರ ರಾಜಭವನಕ್ಕೆ ತೆರಳಿದ ಬೊಮ್ಮಾಯಿ ಅವರು ರಾಜ್ಯಪಾಲ ಗೆಹ್ಲೊಟ್ ಅವರಲ್ಲಿ ಸರ್ಕಾರ ರಚಿಸಲು ಅನುಮಯಿ ನೀಡುವಂತೆ ಮನವಿ ಮಾಡಿದ್ದಾರೆ. ಸರ್ಕಾರ ರಚನೆಗೆ ರಾಜ್ಯಪಾಲ ಗೆಹಲೋತ್ ಒಪ್ಪಿಗೆ ನೀಡಿದ್ದಾರೆ. ರಾಜಭವನದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂದು ಬೆಳಿಗ್ಗೆ 11 ಗಂಟೆಗೆ ನಾನೊಬ್ಬನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ನನ್ನ ಮೇಲೆ ನಂಬಿಕೆಯಿಟ್ಟು ಮುಖ್ಯಮಂತ್ರಿ ಸ್ಥಾನ ನೀಡಿದಂತ ಯಡಿಯೂರಪ್ಪ ಅವರಿಗೆ, ಬಿಜೆಪಿ ವರಿಷ್ಠರಿಗೆ ನನ್ನ ಧನ್ಯವಾದಗಳು ಎಂದು ತಿಳಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ಅಮಿತ್ ಶಾ, ಬಿಜೆಪಿ ನಡ್ಡಾ ಅವರ ಸೂಚನೆಯಂತೆ ನನ್ನನ್ನು ಇಂದು ನಡೆದಂತ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ನೂತನ ಸಿಎಂ ಆಗಿ ಆಯ್ಕೆ ಮಾಡಿದ್ದಾರೆ. ಅವರೆಲ್ಲರಿಗೂ ನನ್ನ ಹೃದಯ ತುಂಬಿದ ಧನ್ಯವಾದಗಳು ಎಂದರು. ಭಾರತೀಯ ಜನತಾ ಪಕ್ಷದ ನಾಯಕರು, ಯಡಿಯೂರಪ್ಪನವರು ಏನೆಲ್ಲಾ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಿರೀಕ್ಷೆಯನ್ನು ಈಡೇರಿಸುವತ್ತ ಕೆಲಸ ಮಾಡುವೆ. ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುವಂತ ಕೆಲಸ ಮಾಡುವೆ. ಮೊದಲನೇ ಪಾಶಸ್ಥ್ಯದಲ್ಲಿ ಕೊರೋನಾ ನಿರ್ವಹಣೆ, ರಾಜ್ಯದ ಜನರ ಸೇವೆ ಮಾಡುವಂತ ಕೆಲಸವನ್ನು ಮಾಡುತ್ತೇನೆ ಎಂದರು. ನಮ್ಮ ಹಿರಿಯರು ಆಶೀರ್ವಾದ ಮಾಡಿದ್ದಾರೆ. ನನಗೆ ಯಾವುದೇ ಬಿಜೆಪಿ ಹೈಕಮಾಂಡ್ ಷರತ್ತನ್ನು ವಿಧಿಸಿಲ್ಲ. ಬಿಜೆಪಿ ನಾಯಕರ ನಿರ್ದೇಶನ, ಸೂಚನೆ ಮೇರೆಗೆ ಕೆಲಸ ಮಾಡುತ್ತೇನೆ. ನಿಟ್ಟಿನಲ್ಲಿ ರಾಜ್ಯದ ಆರ್ಥಿಕ ಸ್ಥಿತಿಯನ್ನು ಸರಿ ದೂಗಿಸುವಂತ ಕೆಲಸವನ್ನು ಮಾಡಿದ್ದೇನೆ. ನಾಯಕರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದರು.

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *