ಪ್ರವಾಹ ಸಂಕಷ್ಟಕ್ಕೀಡಾಗಿರುವ ಸಂತ್ರಸ್ತರ ಸಮಸ್ಯೆ ನಿವಾರಿಸಲು ಪ್ರಮಾಣಿಕ ಪ್ರಯತ್ನ…
 
ನಿಡಗುಂದಿ ತಾಲ್ಲೂಕಿನ ಯಲಗೂರ ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಹಾಗೂ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭೇಟಿ ನೀಡಿ, ಜಿಲ್ಲೆಯ ಜನರಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಬಳಿಕ ಪ್ರವಾಹದಿಂದ ಹಾನಿಗೀಡಾದ ರೈತರ ಜಮೀನುಗಳನ್ನು ವೀಕ್ಷಿಸಿ, ಅನ್ನದಾತರ ಸಮಸ್ಯೆಯನ್ನು ಅರಿತು, ಅವರೊಂದಿಗೆ ಸಮಾಲೋಚನೆ ನಡೆಸಿದರು. ಈ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಪ್ರವಾಹ ಹಾನಿ ಕುರಿತ ವರದಿಯನ್ನು ಬಿಜೆಪಿ ಸರ್ಕಾರಕ್ಕೆ ಸಲ್ಲಿಸಿ, ಶೀಘ್ರದಲ್ಲಿ ಸಂತ್ರಸ್ತರಿಗೆ ಪರಿಹಾರ ದೊರಕಿಸಿಕೊಡಲಾಗುವುದು. ಗ್ರಾಮದಲ್ಲಿ ಜಾಕ್ವೆಲ್ ಮುಳುಗಡೆಯಾಗಿದ ಹಿನ್ನೆಲೆಯಲ್ಲಿ, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಈ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರು, ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿ, ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
 ವರದಿ – ಮಹೇಶ ಶರ್ಮಾ