ಪ್ರವಾಹದಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ ನೆರವು….

Spread the love

ಪ್ರವಾಹದಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ ನೆರವು….

ನಿಪ್ಪಾಣಿ ಮತಕ್ಷೇತ್ರದ ಮಾಣಕಾಪುರದಲ್ಲಿ, ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಜೊಲ್ಲೆ ಉದ್ಯೋಗ ಸಮೂಹದ ವತಿಯಿಂದ 188 ಸಂತ್ರಸ್ತರಿಗೆ ಆಹಾರ ಕಿಟ್ ಗಳನ್ನು ವಿತರಣೆ ಮಾಡಿದರು. ಪ್ರವಾಹದಿಂದ ಸಂಕಷ್ಟಕ್ಕೊಳಗಾಗಿರುವ ಜನರ ನೋವನ್ನು ಅರಿತಿದ್ದೇನೆ. ಬೆಳೆ ಹಾನಿ, ಮನೆ ಕಳೆದುಕೊಂಡ ಕುಟುಂಬದ ಬಗ್ಗೆ ಸೂಕ್ತ ರೀತಿಯಲ್ಲಿ ಸರ್ವೇ ನಡೆಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶೀಘ್ರದಲ್ಲಿ ಅವರಿಂದ ವರದಿ ಪಡೆದು, ಪರಿಶೀಲಿಸಿ, ಬಿಜೆಪಿ ಸರ್ಕಾರದ ವತಿಯಿಂದ ಸಿಗುವ ಪರಿಹಾರವನ್ನು ನೀಡಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *