ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ “ವಾತ್ಸಲ್ಯ” 18 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣಾ ಅಭಿಯಾನ…

ಕಾಗವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ “ವಾತ್ಸಲ್ಯ” 18 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣಾ ಅಭಿಯಾನ ಕಾರ್ಯಕ್ರಮದಲ್ಲಿ ಕಾಗವಾಡ ಮತ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ರಾಜ್ಯ ಸರಕಾರದ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ ಅವರು ಭಾಗವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೋವಿಡ್ -19 ಮೂರನೇ ಅಲೆ ಮುನ್ನೆಚ್ಚರಿಕೆ ಕ್ರಮವಾಗಿ ತಾಲ್ಲೂಕು ಆಡಳಿತವು ಎಲ್ಲಾ ರೀತಿಯ ಕ್ರಮಕೈಗೊಳ್ಳಬೇಕು ನಾವು ನಮ್ಮ ಫೌಂಡೇಶನ್ ವತಿಯಿಂದ ಮಕ್ಕಳಿಗೆ ಬೇಕಾಗುವ ಎಲ್ಲ ರೀತಿಯ ಸೌಲಭವನ್ನು ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಕಾಗವಾಡ ತಹಶೀಲ್ದಾರ್ ಶ್ರೀ ಆರ್. ಆರ್ ಬುರ್ಲಿ, ಅಥಣಿ ತಾಲೂಕು ವೈದ್ಯಾಧಿಕಾರಿ ಡಾ. ಬಸಗೌಡ ಕಾಗೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ವೀರಣಗೌಡ ಎಗನಗೌಡರ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಎಮ್.ಆರ್ ಮುಂಜೆ, ಸಿಡಿಪಿಒ ಶ್ರೀ ಸಂಜೀವಕುಮಾರ ಸದಲಗಿ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮಾ