ಬ್ರಾಹ್ಮಣ ರೈತರಿಗೆ ಕೃಷಿ ಆಧಾರಿತ ಉದ್ಯಮ ಸ್ಥಾಪನೆಗೆ ನೆರವು ನೀಡುವ ‘ಅನ್ನದಾತ ಯೋಜನೆ’ಗೆ ಹಾಗೂ ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಒದಗಿಸುವ ‘ಪುರುಷೋತ್ತಮ’ ಯೋಜನೆಗೆ ಚಾಲನೆ ನೀಡಿದರು…

Spread the love

ಬ್ರಾಹ್ಮಣ ರೈತರಿಗೆ ಕೃಷಿ ಆಧಾರಿತ ಉದ್ಯಮ ಸ್ಥಾಪನೆಗೆ ನೆರವು ನೀಡುವಅನ್ನದಾತ ಯೋಜನೆಗೆ ಹಾಗೂ ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಒದಗಿಸುವಪುರುಷೋತ್ತಮಯೋಜನೆಗೆ ಚಾಲನೆ ನೀಡಿದರು

ಬೆಂಗಳೂರಿನಲ್ಲಿ, ಮುಜರಾಯಿ ಇಲಾಖೆಯಡಿ ಬರುವ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ನೂತನವಾಗಿ ಜಾರಿಗೊಳಿಸಿರುವ ‘ಸಾಂದೀಪನಿ ಶಿಷ್ಯವೇತನ’ ವನ್ನು ನೇರ ನಗದು ವರ್ಗಾವಣೆ ಮೂಲಕ ನೀಡುವ ಪ್ರಕ್ರಿಯೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಜಿ ಅವರ ಜೊತೆಗೂಡಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಚಾಲನೆ ನೀಡಿದರು.  ಇದೇ ವೇಳೆ ಬ್ರಾಹ್ಮಣ ರೈತರಿಗೆ ಕೃಷಿ ಆಧಾರಿತ ಉದ್ಯಮ ಸ್ಥಾಪನೆಗೆ ನೆರವು ನೀಡುವ ‘ಅನ್ನದಾತ ಯೋಜನೆ’ಗೆ ಹಾಗೂ ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಒದಗಿಸುವ ‘ಪುರುಷೋತ್ತಮ’ ಯೋಜನೆಗೆ ಚಾಲನೆ ನೀಡಿದರು. ಬಳಿಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಕಾರ್ಯಚಟುವಟಿಕೆಗಳ ‘ವಿಪ್ರ ವಿಕಾಸ’ ಕೈಪಿಡಿಯನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಶ್ರೀ ಆರ್. ಅಶೋಕ್ ಜಿ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಹೆಚ್.ಎಸ್. ಸಚ್ಚಿದಾನಂದಮೂರ್ತಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *