ಶ್ರೀಪೆವಾಡಿ  ಸರ್ಕಾರಿ ಶಾಲೆಗಳ ಉಳಿವಿಗಾಗಿ ಅಭಿವೃದ್ಧಿ ಕಾರ್ಯ….

Spread the love

ಶ್ರೀಪೆವಾಡಿ  ಸರ್ಕಾರಿ ಶಾಲೆಗಳ ಉಳಿವಿಗಾಗಿ ಅಭಿವೃದ್ಧಿ ಕಾರ್ಯ….

ನಿಪ್ಪಾಣಿ ಮತಕ್ಷೇತ್ರದ  ಶ್ರೀಪೆವಾಡಿ ಗ್ರಾಮದ ಶ್ರೀ ಜೆ.ಎಮ್. ಸಂಕಪಾಳ ಪ್ರೌಢಶಾಲೆಗೆ ಶಾಸಕರ ನಿಧಿಯಿಂದ ಮಂಜೂರಾದ 10 ಲಕ್ಷ ರೂ. ಮೊತ್ತದಲ್ಲಿ ನಿರ್ಮಾಣವಾದ ನೂತನ ಕೊಠಡಿಯನ್ನು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಉದ್ಘಾಟಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಗಾಗಿ ವೇದಿಕೆ ನಿರ್ಮಾಣ ಹಾಗೂ ಫ್ಲೈಓವರ್ ಬ್ಲಾಕ್ ಅಳವಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ಚಾಲನೆ ನೀಡಿದರು. ಯಾರೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಆಶಯ. ಹೀಗಾಗಿ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿ, ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಕಲ್ಪಿಸುತ್ತಿದ್ದೇವೆ ಎಂದು ಹೇಳಿದರು.  ಇದೇ ವೇಳೆ  ಕೋವಿಡ್ -19 ಪರಿಹಾರಾರ್ಥವಾಗಿ ಫಲಾನುಭವಿಗಳಿಗೆ 51 ಆಹಾರ ಸಾಮಗ್ರಿಗಳ ಕಿಟ್ ಹಾಗೂ ಕಟ್ಟಡ ಕಾರ್ಮಿಕರಿಗೆ 17 ಸುರಕ್ಷತಾ ಕಿಟ್ ಗಳನ್ನು ವಿತರಿಸಿದರು.  ಈ ಸಂದರ್ಭದಲ್ಲಿ ಊರಿನ ಹಿರಿಯರು, ಸ್ಥಳೀಯ ಮುಖಂಡರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *