ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ…..

Spread the love

ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ…..

ಬೆಂಗಳೂರುಅಭಿಮಾನಿಗಳ ಪಾಲಿನ ಪವರ್ ಸ್ಟಾರ್, ವರನಟ ಡಾ. ರಾಜ್‌ಕುಮಾರ್ ಕಿರಿಯ ಪುತ್ರ ಪುನೀತ್ ರಾಜ್ ಕುಮಾರ ಅವರ ಅಂತ್ಯ ಸಂಸ್ಕಾರ ಕಂಠೀರವ ಸ್ಟುಡಿಯೋ ಆವರಣದಲ್ಲಿ ಮುಂಜಾನೆ 7.30ಕ್ಕೆ ಸರ್ಕಾರಿ ಗೌರವದೊಂದಿಗೆ ಡಾ. ರಾಜ್‌ಕುಮಾರ್ ಸಮಾಧಿ ಪಕ್ಕದಲ್ಲಿಯೇ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ ನಡೆಯಿತು. ಕುಟುಂಬಸ್ಥರು, ಚಿತ್ರರಂಗದ ಅನೇಕ ಗಣ್ಯರು ಅಗಲಿದ ನಟನಿಗೆ ಅಂತಿಮ ನಮನ ಸಲ್ಲಿಸಿದರು. ಪುನೀತ್‌ರಾಜ್‌ಕುಮಾರ್‌ಗೆ ಗಂಡು ಮಕ್ಕಳು ಇಲ್ಲದ ಕಾರಣ ರಾಘವೇಂದ್ರ ರಾಜ್‌ಕುಮಾರ್ ಪುತ್ರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿವಿಧ ಸಚಿವರು, ಶಾಸಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಪುನೀತ್‌ರಾಜ್‌ಕುಮಾರ್ ಅಂತಿಮ ದರ್ಶನ ಪಡೆದರು. ಪಾರ್ಥಿವ ಶರೀರದ ಮೆರವಣಿಗೆ ಭಾನುವಾರ ಮುಂಜಾನೆ ಕಂಠೀರವ ಸ್ಟೇಡಿಯಂನಿಂದ ಪುನೀತ್ ರಾಜ್‌ಕುಮಾರ್ ಪಾರ್ಥಿವ ಶರೀರವನ್ನು ಪುಷ್ಪಾಲಂಕೃತ ವಾಹನದಲ್ಲಿ, ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಕಂಠೀರವ ಸ್ಟುಡಿಯೋಗೆ ತರಲಾಯಿತು. ಅಭಿಯಾನಿಗಳು ಪಾರ್ಥಿವ ಶರೀರವಿದ್ದ ವಾಹನವನ್ನು ಹಿಂಬಾಲಿಸಿ ನೆಚ್ಚಿನ ನಟನನ್ನು ಅಂತಿಮವಾಗಿ ಕಣ್ತುಂಬಿಕೊಂಡರು. ಈಡಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್‌ಕುಮಾರ್ ಸಮಾಧಿಯಿಂದ 125 ಅಡಿ ಅಂತರದಲ್ಲಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ ಈಡಿಗ ಸಂಪ್ರದಾಯದಂತೆ ನಡೆಸಲಾಯಿತು. ರಾಘವೇಂದ್ರ ರಾಜ್‌ಕುಮಾರ್ ಪುತ್ರ ವಿನಯ್ ರಾಜಕುಮಾರ್ ಅಂತ್ಯಕ್ರಿಯೆ ವಿಧಿವಿಧಾನಗಳನ್ನು ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿಸಿದರು. ಲಕ್ಷಾಂತರ ಅಭಿಮಾನಿಗಳಿಂದ ಅಂತಿಮ ದರ್ಶನ ಶುಕ್ರವಾರ ನಟ ಪುನೀತ್‌ ರಾಜ್‌ಕುಮಾರ್ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಸಂಜೆ ಸದಾಶಿವನಗರ ನಿವಾಸದಿಂದ ಪಾರ್ಥಿವ ಶರೀರವನ್ನು ಕಂಠೀರವ ಸ್ಟುಡಿಯೋಗೆ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಶುಕ್ರವಾರದಿಂದ ಭಾನುವಾರ ಮುಂಜಾನೆ ತನಕ ಸುಮಾರು 10 ಲಕ್ಷ ಜನರು ಅಂತಿಮ ದರ್ಶನ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ.

ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರು. ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಮಂಗಳವಾರ ಪುನೀತ್​ ಸಮಾಧಿಗೆ ಹಾಲು-ತುಪ್ಪ ಬಿಡುವ ಕಾರ್ಯ ಮಾಡಲಾಗುತ್ತದೆ. ಅಲ್ಲಿಯವರೆಗೂ ಕಂಠೀರವ ಸ್ಟುಡಿಯೋಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕಂಠೀರವ ಸ್ಟುಡಿಯೋ ಬಳಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಮಾಡಿಕೊಂಡು ನಂತರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಿದೆ ಎಂದು ಜಿಲ್ಲಾಧಿಕಾರಿ ಮಂಜುನಾಥ್  ಹೇಳಿದ್ದಾರೆ.. ವರದಿ – ಹರೀಶ ಶೇಟ್ಟಿ ಬೆಂಗಳೂರು

Leave a Reply

Your email address will not be published. Required fields are marked *