ವಕೀಲ ಮೋಹನ್ ಕುಮಾರ್ ದಾನಪ್ಪನವರಿಗೆ ಸಮಾಜ ಸೇವಾ ಕ್ಷೇತ್ರದಲ್ಲಿ “ಬಸವ ರತ್ನ ರಾಷ್ಟ್ರ ಪ್ರಶಸ್ತಿ” ಪ್ರಧಾನ!

Spread the love

ವಕೀಲ ಮೋಹನ್ ಕುಮಾರ್ ದಾನಪ್ಪನವರಿಗೆ ಸಮಾಜ ಸೇವಾ ಕ್ಷೇತ್ರದಲ್ಲಿ “ಬಸವ ರತ್ನ ರಾಷ್ಟ್ರ ಪ್ರಶಸ್ತಿ” ಪ್ರಧಾನ!

ದಾವಣಗೆರೆ: ಅ31 ರಂದು ಸರ್ಕಾರಿ ನೌಕರರ ಭವನದಲ್ಲಿ ಭಾರತೀಯ ಕಲಾ ಸಾಂಸ್ಕೃತಿಕ ಅಕಾಡೆಮಿರವರು ಹಮ್ಮಿಕೊಂಡ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿರವರ ಜನ್ಮ ದಿನಾಚರಣೆ ಮತ್ತು ವಿಚಾರ ಸಂಕೀರ್ಣ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆ ಕಂಪ್ಲಿಯ ನಿವಾಸಿ ಸಾಮಾಜಿಕ ಹೋರಾಟಗಾರ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ಅವರ ಸಾಮಾಜಿಕ ರಂಗದ ಅನುಪಮ ಸೇವೆಯನ್ನ ಗುರುತಿಸಿ “ಬಸವ ರತ್ನ ರಾಷ್ಟ್ರ ಪ್ರಶಸ್ತಿ”ನ್ನು ಮುಖ್ಯ ಅತಿಥಿಗಳಾದ ಹದಡಿ ವಿದ್ಯಾವರಣ್ಯ ಯೋಗೇಶ್ವರ ಮಠದ ಶ್ರೀ ಮುರುಳೀಧರ್ ಸ್ವಾಮೀಜಿ, ದಾವಣಗೆರೆ ಮಹಾನಗರ ಪಾಲಿಕೆಯ ಮಹಾ ಪೌರರಾದ ಎಸ್ ಟಿ ವೀರೇಶ್, ದಾವಣಗೆರೆ ವಿಶ್ವವಿದ್ಯಾನಿಲಯದ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಹೆಚ್ ವಿಶ್ವನಾಥ್, ಚಲನಚಿತ್ರ ನಟ ನಿರ್ದೇಶಕ ಸಾಹಿತಿ ಡಾ.ಗುಣವಂತ ಮಂಜು, ದಾವಣಗೆರೆ ಜಿಲ್ಲಾ ಆರೋಗ್ಯ ಇಲಾಖೆಯ ಜಿಲ್ಲಾ ಫಾರ್ಮಸಿ ಅಧಿಕಾರಿ ಡಾ. ಶಿವಾನಂದ ದಳವಾಯಿ, ಭಾರತೀಯ ಕಲಾ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷ ಎನ್ ಮಲ್ಲೇಶಪ್ಪ ಕುಕ್ಕವಾಡ, ವ್ಯವಸ್ಥಾಪಕ ಅಧ್ಯಕ್ಷ ಡಾ. ಎಂ. ಸಂತೋಷ್ ಕುಮಾರ್, ನಿರ್ದೇಶಕರುಗಳಾದ ಡಿಜಿ ಆಸೀಫ್ ಅಲಿ, ಎ ಶ್ರೀನಿವಾಸ್, ಎ.ಕೆ.ಪ್ರಕಾಶ್, ಆರ್. ರವಿ ನಾಯಕ್,ರವರು ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು, ನಂತರ ಪ್ರಶಸ್ತಿ ಸ್ವೀಕರಿಸಿ ಮೋಹನ್ ಕುಮಾರ್ ದಾನಪ್ಪನವರು ” ಸಾಮಾಜಿಕ ಸೇವೆಯನ್ನ ಗುರುತಿಸಿ ನೀಡುವ ಪ್ರಶಸ್ತಿ ಪ್ರಧಾನಗಳು ಸಮಾಜದಲ್ಲಿ ನಮ್ಮ ಗೌರವವನ್ನ ಹೆಚ್ಚಿಸುವುದಲ್ಲದೇ ಸಾಮಾಜಿಕ ಜವಾಬ್ದಾರಿಗಳನ್ನು ಇನ್ನಷ್ಟು ಹೆಚ್ಚಿಸುತ್ತವೆ, ಸಾಮಾಜಿಕ ರಂಗದಲ್ಲಿ ಕಳೆದ 12 ವರ್ಷಗಳಿಂದ ಸಲ್ಲಿಸಿದ ಸೇವೆಯನ್ನ ಗುರುತಿಸಿ ನೀಡಿರುವ ಈ ಪ್ರಶಸ್ತಿ ನನಗೆ ಸಮಾಜ ಸೇವೆಗೆ ಇನ್ನಷ್ಟು ಸ್ಪೂರ್ತಿ ನೀಡಿದ್ದು ದಲಿತ ಹಿಂದುಳಿದ ಅಲ್ಪ ಸಂಖ್ಯಾತರ ಶೋಷಿತರ, ಧ್ವನಿಯಾಗಿ ಸೇವೆ” ಸಲ್ಲಿಸುವುದಾಗಿ ತಿಳಿಸಿದರು,

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *