ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ : ಮನೆ ಮನೆಗೆ ಸೌರ ವಿದ್ಯುತ್ ಸೌಲಭ್ಯ…

Spread the love

ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ : ಮನೆ ಮನೆಗೆ ಸೌರ ವಿದ್ಯುತ್ ಸೌಲಭ್ಯ…

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಕೇಂದ್ರ ಪಂಚಾಯತ್ ರಾಜ್ ಖಾತೆ ಸಚಿವ ಕಪಿಲ್ ಮೋರೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾಮಾಂತರ ಪ್ರದೇಶದ ಮನೆಗಳಿಗೆ ಸೌರ ವಿದ್ಯುತ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿನ ಮನೆಗಳಿಗೆ ಸೌರ ವಿದ್ಯುತ್ ಸೌಲಭ್ಯ ನೀಡಲು ನೆರವು ಕಲ್ಪಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಕಪಿಲ್ ಮೋರೇಶ್ವರ್ ಅವರು, ಗ್ರಾಮಾಂತರ ಪ್ರದೇಶಗಳ ಮನೆಗಳಿಗೆ ಸೌರ ವಿದ್ಯುತ್ ಸೌಲಭ್ಯ ಕಲ್ಪಿಸಲು ಆರ್ಥಿಕ ನೆರವು ಕೋರಿ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇನ್ನು ಜಲಜೀವನ ಯೋಜನೆಯನ್ನು ಪರಿಣಾಮಕಾರಿ ಯಾಗಿ ಅನುಷ್ಠಾನಗೊಳಿಸುವ ಸಂಬಂಧ, ಸಿಇಓ ಗಳು ಕಡ್ಡಾಯವಾಗಿ ಗ್ರಾಮಪಂಚಾಯತ್ ಗಳಿಗೆ ಭೇಟಿ ನೀಡಿ. ಈ ಮೂಲಕ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *