ಗಂಗಾವತಿಯಲ್ಲಿ ನಡೆದ 2020-21ನೇ ಸಾಲಿನ ರಾಜ್ಯಮಟ್ಟದ ಪೆಂಕಾಕ್ ಸಿಲತ್ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿ, ಸೀನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಬಂಗಾರದ ಪದಕವನ್ನು ಪಡೆಯುವುದರ ಮೂಲಕ ಡಿಸೆಂಬರ್‌ನಲ್ಲಿ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

Spread the love

ಗಂಗಾವತಿಯಲ್ಲಿ ನಡೆದ 2020-21ನೇ ಸಾಲಿನ ರಾಜ್ಯಮಟ್ಟದ ಪೆಂಕಾಕ್ ಸಿಲತ್ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿ, ಸೀನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಬಂಗಾರದ ಪದಕವನ್ನು ಪಡೆಯುವುದರ ಮೂಲಕ ಡಿಸೆಂಬರ್ನಲ್ಲಿ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

ಚಿಕ್ಕಮಗಳೂರು ತಾಲ್ಲೂಕಿನ ಕಸಬಾ ಹೋಬಳಿ ಧರಗುಣಿ ಗ್ರಾಮದಲ್ಲಿ ವಾಸವಿರುವ ಚೌಡಯ್ಯ(ಸಿದ್ದೇಶ) ಮತ್ತು ಗಾಯಿತ್ರಿಯವರ  ಮಗಳಾದ, ಕುಮಾರಿ ಇಂಚರಾ ಸಿ. ಎಂಬ ವಿದ್ಯಾರ್ಥಿನಿ ಚಿಕ್ಕಮಗಳೂರು ನಗರದ ಬಸವನಹಳ್ಳಿ ಸರಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ 2020-21ನೇ ಸಾಲಿನ ರಾಜ್ಯಮಟ್ಟದ ಪೆಂಕಾಕ್ ಸಿಲತ್ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿ, ಸೀನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಬಂಗಾರದ ಪದಕವನ್ನು ಪಡೆಯುವುದರ ಮೂಲಕ ಡಿಸೆಂಬರ್‌ನಲ್ಲಿ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಇವಳಿಗೆ ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಶೋಭಾ ಕರಂದ್ಲಾಜೆಯವರು ಕಾಲೇಜಿನಲ್ಲಿ ಸನ್ಮಾನ ಮಾಡಿರುತ್ತಾರೆ. ಈ ವಿದ್ಯಾರ್ಥಿನಿ ಕೋಚ್ ಗಳಾದ, ಗಿರೀಶ್ ಮತ್ತು ಯಶವಂತರವರ ಮಾರ್ಗದರ್ಶನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವಲ್ಲಿ ಸಹಕಾರಿಯಾಗಿರುವ ಕೋಚ್ ಗಳಿಗೆ ಧನ್ಯವಾದಗಳು. ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಗ್ರಾಮಕ್ಕೆ ಹಾಗೂ ತಾನು ಓದುತ್ತಿರುವ ಕಾಲೇಜಿಗೂ ಕೀರ್ತಿ ತಂದಿದ್ದು, ಮುಂದೆಯೂ ಕೂಡಾ ರಾಷ್ಟ್ರಮಟ್ಟದಲ್ಲಿ ಗೆಲವು ಸಾಧಿಸಲು ಹಾರೈಸೋಣ !

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *