ಕಲೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾರತಿ ಕುಲಕರ್ಣಿ ಆಯ್ಕೆ…….

Spread the love

ಕಲೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾರತಿ ಕುಲಕರ್ಣಿ ಆಯ್ಕೆ…….

ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿಗೆ ಕಲಾ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ  ಶ್ರೀಮತಿ ಭಾರತಿ ಕುಲಕರ್ಣಿ  ಆಯ್ಕೆಯಾಗಿದ್ದಾರೆ. ಇದೇ ಬರುವ ಮಾರ್ಚ್ 6ರಂದು ಭಾನುವಾರ ಬೆಂಗಳೂರಿನ ಬಾಗಲಗುಂಟೆಯ ಹೆಸರುಗಟ್ಟ ಮುಖ್ಯರಸ್ತೆಯಲ್ಲಿರುವ ಶ್ರೀ ಸಾಯಿ ಕಲ್ಯಾಣ ಮಂಟಪದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ 5ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟಿನ ಸಂಸ್ಥಾಪಕ ರಾಜ್ಯ ಅಧ್ಯಕ್ಷರಾದ ಶ್ರೀ ಹನುಮಂತಪ್ಪ ಮೇಡೆಗಾರ ತಿಳಿಸಿದ್ದಾರೆ. ಹಿಂದೆ ನಡೆಸಿದ 25 ವಾರಗಳ ವಿವಿಧ ಆನ್ಲೈನ್ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ಪ್ರತಿ ಸ್ಪರ್ಧೆಯಲ್ಲೂ ಪ್ರಥಮ, ದ್ವಿತೀಯ ಅಥವಾ ತೃತೀಯ ಬಹುಮಾನ ಪಡೆದ ಕಲಾಕುಸುಮಗಳಿಗೆ ಸನ್ಮಾನಿಸಿ ಅಭಿನಂದಿಸಿ ಗೌರವಿಸಲಾಗುವುದು.

ನೂಲಿನಂತೆ ಸೀರೆ ತಾಯಿಯಂತೆ ಮಗಳುಎಂಬ ಮಾತಿನಂತೆ ತಾಯಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿ ಸಾಧನೆಗೈದ್ದರೆ ಮಗಳು ಕುಮಾರಿ ಅನುರಾಧ ಕುಲಕರ್ಣಿ (8 ವರ್ಷ) 25 ವಾರಗಳ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಪ್ರಥಮ ದ್ವಿತೀಯ ತೃತೀಯ ಬಹುಮಾನ ಪಡೆದು ಗೌರವಕ್ಕೆ ಪಾತ್ರಳಾಗಿದ್ದಾಳೆ. ತಾಯಿ ಮಗಳಸಾಧನೆ ಮತ್ತು ಕೀರ್ತಿ ರಾಜ್ಯ, ರಾಷ್ಟ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಲಿ ಇನ್ನಷ್ಟು ಹೆಚ್ಚೆಚ್ಚು ಸಾಧನೆ ಮಾಡುವಂತಾಗಲಿ ಎಂದು ಟ್ರಸ್ಟಿನ ಪದಾಧಿಕಾರಿಗಳು, ಮೂರೂರು ಪ್ರಗತಿ ವಿದ್ಯಾಲಯದ ಆಡಳಿತಮಂಡಳಿಯವರು, ಮುಖ್ಯಾಧ್ಯಾಪಕರು ಹಾಗೂ ಸಂಪೂರ್ಣ ಶಿಕ್ಷಕ ವೃಂದ (ಸಹೋದ್ಯೋಗಿಗಳು), ಮಿತ್ರವೃಂದದವರು ಮತ್ತು ಬಂಧುಬಳಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ವರದಿ ಸಂಪಾದಕೀಯ

Leave a Reply

Your email address will not be published. Required fields are marked *