ಸಿಎಂ ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಮಂಡನೆ…..

Spread the love

ಸಿಎಂ ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಮಂಡನೆ…..

ಪ್ರಗತಿವಾಹಿನಿ ಸುದ್ದಿ;ಬೆಂಗಳೂರು: ವಿಧಾನಸೌಧದಲ್ಲಿ 2022-23ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, 2,53,165 ರೂಪಾಯಿ ಗಾತ್ರದ ಆಯವ್ಯಯ ಮಂಡಿಸುತ್ತಿರುವುದಾಗಿ ತಿಳಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್ ಮಂಡನೆಯಾಗಿತ್ತಿದ್ದು, ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳ ಮಾಡಲಾಗಿದೆ. ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ

2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ

ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ 1,600 ಕೋಟಿ

ಗ್ರಾಮ ಒನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ

ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1000 ರೂ ಗೌರವ ಧನ ಹೆಚ್ಚಳ

ಬಿಸಿಯೂಟ ತಯಾರಿಕರಿಗೂ ತಲಾ 1000 ಗೌರವ ಧನ ಹೆಚ್ಚಳ

ಪೌರಕಾರ್ಮಿಕರಿಗೆ 2 ಸಾವಿರ ರೂ. ಮಾಸಿಕ ಸಂಕಷ್ಟ ಭತ್ಯೆ

ಬೆಳಕು ಕಾರ್ಯಕ್ರಮದಡಿ 98 ಸಾವಿರ ಮನೆಗೆ ವಿದ್ಯುತ್

ಸರ್ವರಿಗೂ ಸೂರು ಯೋಜನೆ ಅಡಿ 6,612 ಕೋಟಿ ರೂಪಾಯಿ ವೆಚ್ಚದಲ್ಲಿ 5 ಲಕ್ಷ ಹೊಸ ಮನೆಗಳು

ಪೊಲೀಸ್ ಗೃಹ ಯೋಜನೆಗೆ 250 ಕೋಟಿ ರೂಪಾಯಿ ಅನುದಾನ ಘೋಷಣೆ

ಕೃಷಿ ಇಲಾಖೆಗೆ 33,700 ಕೋಟಿ ರೂಪಾಯಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,713 ಕೋಟಿ ರೂಪಾಯಿ

ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 17,325 ರೂಪಾಯಿ

ವಸತಿ ಇಲಾಖೆಗೆ 3,594 ರೂಪಾಯಿ

ಆಹಾರ ಇಲಾಖೆಗೆ 2,288 ಕೋಟಿ ರೂಪಾಯಿ

ಸಮಾಜ ಕಲ್ಯಾಣ ಇಲಾಖೆಗೆ 9,389 ಕೋಟಿ ರೂಪಾಯಿ

ಇಂಧನ ಇಲಾಖೆಗೆ 12,655 ಕೋಟಿ ರೂಪಾಯಿ

ಕಂದಾಯ ಇಲಾಖೆಗೆ 16,388 ಕೋಟಿ ರೂಪಾಯಿ

ಲೋಕೋಪಯೋಗಿ ಇಲಾಖೆಗೆ 10,447 ಕೋಟಿ ರೂಪಾಯಿ

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *