ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಚಿವ ಹಾಲಪ್ಪ ಆಚಾರ್ ಚಾಲನೆ,,,,,

Spread the love

ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಚಿವ ಹಾಲಪ್ಪ ಆಚಾರ್ ಚಾಲನೆ,,,,,

ಕೊಪ್ಪಳ: ಮಾವು ಮೇಳ ಆರಂಭವಾಗಿದೆ. ಇದೇ ಮೇ 30 ರವರೆಗೆ ತೋಟಗಾರಿಕೆ ಇಲಾಖೆ ಮಾವು ಮೇಳ ಆಯೋಜಿಸಿದೆ. ಈ ಮಾವು ಮೇಳವನ್ನು ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ಅವರು ಸೋಮವಾರ ಚಾಲನೆ ನೀಡಿದರು. ಮಾವು ಮೇಳದಲ್ಲಿ ವಿವಿಧ ಬಗೆಯ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಎಂಟು ದಿನಗಳ ವರೆಗೆ ನಡೆಯುತ್ತಿದ್ದು, ಹಣ್ಣುಗಳ ರಾಜ ಎಂದೇ ಖಾತೆ ಹೊಂದಿರುವ ಮಾವು, ಈ ಸಲ ತಡವಾಗಿ ಬಂದಿದೆಯಾದರೂ, ಕೊಪ್ಪಳ ನಗರದಲ್ಲಿ ಈಗ ಒಂದೇ ಸೂರಿನಡಿ ಸಿಗುತ್ತಿವೆ. ಮೇಳದಲ್ಲಿ ಸುಮಾರು 20 ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಲಾಗಿದ್ದು, ಈ ಮಳಿಗೆಗಳ ಮೂಲಕ ಗ್ರಾಹಕರು ನೇರವಾಗಿ ರೈತರಿಂದ ಹಣ್ಣುಗಳನ್ನು ಖರೀದಿಸುತ್ತಿದ್ದಾರೆ. ವಿವಿಧ ಬಗೆಯ ಮಾವಿನ ಹಣ್ಣುಗಳ ಪ್ರದರ್ಶನ ನಡೆಯುತ್ತಿದ್ದು, ಆಪೋಸ್, ಬೆನೆಷಾನ್, ರಸಪೂರಿ, ಕೇಸರಿ, ದಶಾಹರಿ ಸೇರಿದಂತೆ ಅನೇಕ ತಳಿಯ ಮಾವಿನ ಹಣ್ಣುಗಳು ಮಾರಾಟಕ್ಕೆ ಲಭ್ಯವಿದ್ದು, ರೈತರು ಹಾಗೂ ಗ್ರಾಹಕರಿಗೆ ಮಾವಿನ ಹಣ್ಣುಗಳು ಕಡಿಮೆ ಬೆಲೆಗೆ ದೊರೆಯುತ್ತಿದೆ. ಮೇಳದಲ್ಲಿ ಯಾವುದೇ ರಾಸಾಯನಿಕ ಬಳಸದೆ ಕೇವಲ ನೈಸರ್ಗಿಕವಾಗಿ ಬೆಳೆದ ಮಾವಿನ ಹಣ್ಣುಗಳ ಮಾರಾಟಕ್ಕಿಡಲಾಗಿದೆ. ಈ ಬಾರಿ ಮಾವಿನ ಹಣ್ಣುಗಳು ತಡವಾಗಿ ಬಂದರೂ ಮಾರಾಟವಾಗಬಹುದು ಎಂಬ ನಿರೀಕ್ಷೆಯನ್ನು ತೋಟಗಾರಿಕೆ ಇಲಾಖೆಯು ಹೊಂದಿದೆ. ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ಮಾತನಾಡಿ ಈ ಜಿಲ್ಲೆಯ ಮಾವು ಬೆಳೆಗಾರರಿಗೆ ಶಕ್ತಿ ತುಂಬಿದಂತಾಗಿದೆ. ಮಾವು ಮೇಳದಲ್ಲಿ ಮಾವು ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವಿವಿಧ ತಳಿಗಳ ಮಾವುಗಳನ್ನು ಖರೀದಿ ಮಾಡಬೇಕು, ಈ ಸೌಲಭ್ಯವನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಕೊಂಡು ಈ ವಿನೂತನ ಮಾವು ಮೇಳಕ್ಕೆ ಬಂದು ಮಾವಿನ ಸವಿ ರುಚಿಯನ್ನು ಸವಿಯಬಹುದು. ಈ ವೇಳೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಮುನಿರಾಬಾದ್ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಯೋಜನೆಯ (ಕಾಡಾ) ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿ.ಹೆಚ್.ಎಮ್.,ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಯಂಕಣ್ಣ ಯರಾಶಿ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ ಫೌಜಿಯಾ ತರನ್ನುಮ್, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ.ಎಂ.ಬಿ. ಪಾಟೀಲ್, ತೋಟಗಾರಿಕೆ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಅನೇಕರು ಇದ್ದರು.

ವರದಿ –  ಹುಸಸೇನಬಾಷಾ ಮೋತೆಖಾನ್

Leave a Reply

Your email address will not be published. Required fields are marked *