ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

Spread the love

ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಇಂದು ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ವಿವಿಧ ಅಂಗಸಂಸ್ಥೆಗಳಾದ ಶ್ರೀ ಬೀರೇಶ್ವರ ಕೋ-ಆಫ್ ಕ್ರೆಡಿಟ್ ಸೊಸೈಟಿ ಲಿ. ಯಕ್ಸಂಬಾ ಹಾಗೂ ಜೊಲ್ಲೆ ಎಜ್ಯುಕೇಶನ್ ಸೊಸಾಯಿಟಿಯ ಅಂಗ ಸಂಸ್ಥೆಯಾದ ಶಿವಶಂಕರ ಜೊಲ್ಲೆ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲೆಯಲ್ಲಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಹಾಗೂ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಶ್ರೀ. ಜ್ಯೋತಿಪ್ರಸಾದ ಜೊಲ್ಲೆ ಯವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಿದರು. ಈ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹೊಸ್ತಿಲಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಹೋರಾಟಗಾರರಿಗೆ ಗೌರವ ಸಲ್ಲಿಸೋಣ ಎಂದು ಹೇಳಿದರು.  ಈ ಸಂದರ್ಭದಲ್ಲಿ ಜೊಲ್ಲೆ ಉದ್ಯೋಗ ಸಮೂಹದ ವಿವಿಧ ಅಂಗ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಸಂಸ್ಥೆಯ ಪದಾಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *